ಮಡಿಕೇರಿ ಜೂ.26 NEWS DESK : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಘಟಕದ 3ನೇ ವಾರ್ಷಿಕೋತ್ಸವದ ಅಂಗವಾಗಿ ಜೂ.27 ರಂದು ಮಡಿಕೇರಿಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಡಿಕೇರಿಯ ಹ್ಯೂಮಾನಿಟಿ ಫಸ್ಟ್ ಇಂಡಿಯಾ ಸಂಸ್ಥೆ ಹಾಗೂ ಕೊಡಗು ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುಮಾರು 50 ಬಾರಿ ರಕ್ತ ನೀಡಿದ ಮಹಾದಾನಿ ರಾಮಪ್ಪ ಶಿಬಿರವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪಿ.ಎಂ.ರವಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕೋವಿಡ್ ಸಂದರ್ಭ ಜಿಲ್ಲೆಯಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದರಿಂದ ಬ್ಲಡ್ ಫೌಂಡೇಶನ್ನ ಸಮೀರ್, ವಿನು ಹಾಗೂ ತಂಡ ಶ್ರಮ ಮೀರಿ ರಕ್ತ ಸಂಗ್ರಹಕ್ಕೆ ಮುಂದಾಗಿದ್ದರು. ಅಲ್ಲಿಂದೀಚೆ ರಕ್ತದಾನವನ್ನು ದೇವರ ಸೇವೆ ಎಂಬಂತೆ ಬ್ಲಡ್ ಫೌಂಡೇಶನ್ ಮಾಡುತ್ತಿದೆ ಎಂದು ಶ್ಲಾಘೀಸಿದರು.
ಬ್ಲಡ್ ಫೌಂಡೇಶನ್ನ ಪ್ರಮುಖ ಸಮೀರ್ ಮಾತನಾಡಿ, ಈ ಬಾರಿ ಶಿಬಿರದ ಮೂಲಕ ಸುಮಾರು 50 ಯೂನಿಟ್ ರಕ್ತ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಕ್ತದಾನಿ ರಾಮಪ್ಪ, ಸಮಾಜ ಸೇವಕರಾದ ಗಣೇಶ್ ಕಡಗದಾಳು, ವಿನೋದ್ ಹಾಗು ಕ್ರಿಯೇಟಿವ್ ಖಲೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು.
ಬ್ಲಡ್ ಫೌಂಡೇಶನ್ನ ಪ್ರತಿನಿಧಿ ಚಂದನ್ ನಂದರಬೆಟ್ಟು ಮಾತನಾಡಿ, ಕೊಡಗಿನ ಐದು ತಾಲ್ಲೂಕುಗಳಿಗೂ ಮಡಿಕೇರಿಯಲ್ಲಿ ಒಂದೇ ಒಂದು ರಕ್ತ ನಿಧಿ ಕೇಂದ್ರವಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ರಕ್ತದ ಅಗತ್ಯವಿರುವುದರಿಂದ ದಾನಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ರಕ್ತ ನೀಡಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬ್ಲಡ್ ಫೌಂಡೇಶನ್ನ ಪ್ರಮುಖರಾದ ವಿನು, ಮಹಮ್ಮದ್ ಶರೀಫ್, ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅನು ಕಾರ್ಯಪ್ಪ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*