ಮಡಿಕೇರಿ ಜೂ.26 NEWS DESK : ಇದೇ ಜೂ.27 ರಿಂದ ಜು.2 ರವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕರಾದ ಕರ್ನಲ್ ಗೌರವ್ ತಾಪ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ಎನ್ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ನಿರ್ದೇಶನ ನೀಡಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*