ಕಡಂಗ ಜೂ.26 NEWS DESK : ಕೊಡಗಿನ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜನಪರ, ಜನಪ್ರಿಯ ನಾಯಕ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ಬಿಜೆಪಿ ದಹಿಸಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷಾತೀತ ಮತ್ತು ಜಾತ್ಯತೀತವಾಗಿ ಎಲ್ಲಾ ಜನಾಂಗದವರನ್ನು ಒಗ್ಗಟ್ಟಾಗಿ ಮುನ್ನಡೆಸುತ್ತಿರುವ ಪೊನ್ನಣ್ಣ ಅವರು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಪೊನ್ನಣ್ಣ ಅವರ ಬೆಳವಣಿಗೆಯನ್ನು ಸಹಿಸಲಾಗದೆ ಬಿಜೆಪಿ ಈ ರೀತಿ ವರ್ತಿಸುತ್ತಿದೆ. ಬಿಜೆಪಿ ಕೊಡಗಿನ ಪ್ರಬುದ್ಧ ರಾಜಕಾರಣಕ್ಕೆ ಕಳಂಕ ತಂದಿದೆ ಎಂದು ಅವರು ಆರೋಪಿಸಿದ್ದಾರೆ.