ಸುಂಟಿಕೊಪ್ಪ ಜೂ.27 NEWS DESK : ಇಂದಿನ ಯುವ ಪೀಳಿಗೆ ಮಾದಕ ದ್ರವ್ಯಗಳ ವ್ಯಸಕ್ಕೆ ಬಲಿಯಾಗುವತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಮತ್ತು ಯುವ ಸಮುದಾಯವನ್ನು ಕಾಡುತ್ತಿರುವ ಗಂಭೀರ ಸಮಸ್ಯೆಯಾಗಿದೆ ಎಂದು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿ ಮತ್ತು ಬರಿಸುವ ಮಾದಕವ್ಯಸನಿಗಳು ನಮ್ಮಗಳ ಶಾರೀರಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರಿ, ವ್ಯಕ್ತಿಯನ್ನು ಜೀವಚ್ಛವವವಾಗಿ ಮಾಡುತ್ತವೆ ಎಂದರು. ಶರೀರದ ನರಮಂಡಲದ ಮೇಲೆ ಮಾದಕ ವ್ಯಸನಿಗಳಿಂದ ವ್ಯತಿರಿಕ್ತ ಪರಿಣಾಮ ಉಂಟಾಗಿ ವ್ಯಕ್ತಿಯು ಸಾವಿನ ದವಡೆಗೆ ದೂಡಲ್ಪಡುತ್ತದೆ ಎಂದರು.
ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಚಾರಣೆಯ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯಪೇದೆ ರಮೇಶ್ ಮಾತನಾಡಿ, ಸೈಬರ್ ಕ್ರೈಮ್ ಬ್ರ್ಯಾಂಚ್‍ನಿಂದ ಮಾದಕ ವ್ಯಸನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಉಂಟು ಮಾಡಲು ಆಗಮಿಸಿದ್ದ ಮಾದಕ ವಸ್ತುಗಳಿಗೆ ಜನ ಸಮುದಾಯ ಬಲಿಯಾಗುತ್ತಿರುವುದು ಅತಂಕದ ವಿಚಾರವೆಂದು ಕಳವಳ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸುತ್ತಿರುವ ಮಾದಕ ದ್ರವ್ಯಗಳು ವ್ಯಸಕ್ಕೆ ತುತ್ತಾಗುತ್ತಿರುವ ಹಿನ್ನಲೆಯಲ್ಲಿ ತಮ್ಮ ವಿದ್ಯಾಭ್ಯಾಸಕ್ಕೆ ಮೊಟಕುಗೊಳಿಸಿಕೊಳ್ಳುವ ಮೂಲಕ ಮಾರಕವಾಗಿ ರೂಪುಗೊಳ್ಳುತ್ತಿರುವುದು ಕಂಡು ಬರುತ್ತಿದೆ. ದೈಹಿಕವಾಗಿ ಮಾನಸಿಕವಾಗಿ ಮನುಷ್ಯನ ಜೀವನವನ್ನು ಜರ್ಜರಿತರನ್ನಾಗಿ ಮಾಡುತ್ತಿವೆ. ಮಾದಕ ದ್ರವ್ಯಗಳನ್ನು ಮಾರಾಟ ಮಾಡುವುದು ಮತ್ತು ಸೇವಿಸುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.
ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್ ಹಾಗೂ ಅಪರಾಧ ವಿಭಾಗದ ಪಿಎಸ್‍ಐ ಸ್ವಾಮಿ ಹಾಗೂ ಕಾಲೇಜುಉಪನ್ಯಾಸಕಿ ಸುನಿತಾ ಗಿರೀಶ್ ಅವರುಗಳು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.