ಮಡಿಕೇರಿ ಜೂ.28 NEWS DESK : ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯೋಪದ್ಯಾಯರಾದ ವೇದಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಕೆಡುಕುಗಳು ಮತ್ತು ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ದ್ರವ್ಯಗಳ ನಿರ್ಮೂಲನೆಯ ಕುರಿತು ಹಾಗೂ ಅವ್ಯಾಹತವಾಗಿ ನಡೆಯುತ್ತಿರುವ ಕಳ್ಳ ಸಾಗಣೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದರಲ್ಲದೆ, ಸಾಮಾಜಿಕ ಪಿಡುಗು ನಿವಾರಿಸಿ, ಸಮ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸರ್ವರೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಸಹ ಶಿಕ್ಷಕ ಕಿಶೋರ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿಯರಾದ ಸುಮಿತ್ರ, ಮಂಜುಳ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.