ಮಡಿಕೇರಿ ಜೂ.28 NEWS DESK : ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.
ರಾಜಾಸೀಟು ಪ್ರವೇಶ ದ್ವಾರದ ಟಿಕೆಟ್ ಕೌಂಟರ್ ಬಳಿ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸೆಲ್ಟರ್ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡದರು. ರಾಜಾಸೀಟನ್ನು ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರೇಟರ್ ರಾಜಾಸೀಟು ಅಭಿವೃದ್ಧಿ ಸಂಬಂಧ ಬಾಕಿ ಇರುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಬೇಕು. ಅಗತ್ಯ ಇರುವ ಕಡೆ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನಗರಸಭೆಯಿಂದ ನೀರು ಸಂಪರ್ಕ ಪಡೆಯುವುದು ಸೇರಿದಂತೆ ಅಗತ್ಯ ಕ್ರಮವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೀಶ್ ಮಾತನಾಡಿ, ರಾಜಾಸೀಟು, ಕೂರ್ಗ್ ವಿಲೇಜ್ ಅಭಿವೃದ್ಧಿ ಜೊತೆಗೆ ಗದ್ದುಗೆ ಉದ್ಯಾನವನ ಹಾಗೂ ನೆಹರು ಮಂಟಪ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ರಾಜಾಸೀಟು ಉದ್ಯಾನವನ ನಿರ್ವಹಣೆ ಹಾಗೂ ಅಭಿವೃದ್ಧಿ ಸಂಬಂಧ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ರಾಜಾಸೀಟಿನಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಬಗ್ಗೆ ಎಲ್‍ಇಡಿ ಫಲಕ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಸಹಾಯಕ ಎಂಜಿನಿಯರ್ ಸತೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಅವರು ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.