ವಿರಾಜಪೇಟೆ ಜೂ.29 NEWS DESK : ಮಾದಕ ವ್ಯಸನ ಕೇವಲ ವ್ಯಕ್ತಿಯನ್ನಷ್ಟೇ ಹಾಳು ಮಾಡುವುದಿಲ್ಲ. ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತದೆ ಎಂದು ವಿರಾಜಪೇಟೆ ವಿಭಾಗದ ಆರಕ್ಷಕ ಉಪ ಅಧೀಕ್ಷಕರಾದ ಮೋಹನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಆರಕ್ಷಕ ಇಲಾಖೆ ಮತ್ತು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದ ಯುವ ವರ್ಗವು ಮಾದಕವಸ್ತು ಸೇವನೆಗೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕದ್ರವ್ಯ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ.ಅಲ್ಲದೆ ಸಮಾಜದಿಂದ ಧಿಕ್ಕರಿಸುವಂತನಾಗುತ್ತಾನೆ.ಇದು ಜೇಡ ಬಲೆಯಂತೆ ಸುಳಿಯಲ್ಲಿ ಸಿಲುಕಿದ ವ್ಯಕ್ತಿ ಹೊರಬರಲು ಹರ ಸಹಾಸ ಪಡುವ ಪ್ರಮೇಯ ಎದುರಾಗುತ್ತದೆ. ಮಾದಕದ್ರವ್ಯ ಮತ್ತು ವಸ್ತುಗಳ ಉಪಯೋಗ ಹಾಗೂ ಮಾರಾಟ ಕಾನೂನು ಬಾಹಿರವಾಗಿದೆ. ವ್ಯಸನದ ಆರಂಭದಲ್ಲೇ ತ್ಯಜಿಸುವ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ವಿರಾಜಪೇಟೆ ವೃತ್ತ ನಿರೀಕ್ಷ ಶಿವರುದ್ರ ಮಾತನಾಡಿ, ಮಾದಕದ್ರವ್ಯ ಮತ್ತು ಮಾದಕವಸ್ತುಗಳ ಉಪಯೋಗದಿಂದಾಗುವ ಪರಿಣಾಮಗಳ ಬಗ್ಗೆ ಹಾಗೂ ಕಾನೂನು ಕಾಯ್ದೆಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸಿದರು. ವಿರಾಜಪೇಟೆ ನಗರ ಠಾಣಾಧಿಕಾರಿ ರವೀಂದ್ರ ಮಾತನಾಡಿ, ಮಾದಕದ್ರವ್ಯ ವ್ಯಸನದಿಂದಾಗುವ ಅಡ್ಡ ಪರಿಣಾಮಗಳು, ಸಮಾಜದ ಮೇಲಾಗುವ ಪರಿಣಾಮ, ಕುಟುಂಬ ವ್ಯವಸ್ಥೆ, ಹಣಕಾಸಿನ ಸಮಸ್ಯೆಗಳನ್ನುಸಾಕ್ಷ್ಯ ಚಿತ್ರದ ಮೂಲಕ ವಿಧ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಡಾಯನಾ ಸೋಮಯ್ಯ, ಆರಕ್ಷಕ ಇಲಾಖೆಯ ಸಿಬ್ಬಂದಿಗಳು, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು,ವಿಧ್ಯಾರ್ಥಿಗಳು ಹಾಜರಿದ್ದರು.
ವರದಿ : ಕಿಶೋರ್ ಕುಮಾರ್ ಶೆಟ್ಟಿ