ಮಡಿಕೇರಿ ಜೂ.29 NEWS DESK : ಫವಿ ಸೇವಾ ಟ್ರಸ್ಟ್ ವತಿಯಿಂದ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಲ್ಯಾಪ್ಟಾಪ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಪವಿ ಸೇವಾ ಟ್ರಸ್ಟ್ ಸಂಚಾಲಕ ಅಳಮೇಂಗಡ ಮಾಳವಿಕಾ ರಮೇಶ್ ಮಾತನಾಡಿ, ನಾಗರಹೊಳೆ ಅಭಯ ಅರಣ್ಯದಂಚಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 25 ಲ್ಯಾಪ್ಟಾಪ್ ಗಳನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅವರಿಗೆ ಹಸ್ತಾಂತರಿಸಲಾಗಿದೆ ಎಂದರು.
ಸಂಸ್ಥೆಯ ಉಪಾಧ್ಯಕ್ಷ ಕಾಯಮಾಡ ರಾಜ, ಪ್ರಾಂಶುಪಾಲ ಪ್ರಭು, ಮುಖ್ಯ ಶಿಕ್ಷಕ ಚಂದ್ರಶೇಖರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.