ಮಡಿಕೇರಿ ಜೂ.29 NEWS DESK : ಹಾಲಿನ ದರ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್, ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರೈತ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರು ಪಾಲ್ಗೊಂಡಿದ್ದರು.