ಮಡಿಕೇರಿ ಜೂ.29 NEWS DESK : ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ತೆನ್ನಿರ ಮೈನಾ ಎಂಬ ವ್ಯಕ್ತಿ ನಿರಂತರವಾಗಿ ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಮಡಿಕೇರಿ ನಗರ ಮಂಡಲ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ, ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ತೆನ್ನಿರಾ ಮೈನಾ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಅವಹೇಳನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನು ಹೆಂಡ ಕುಡಿದ ಕೋತಿಗಳು ಎಂದು ತೇಜೋವಧೆ ಮಾಡಿದ್ದು, ಇದರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಮುಜುಗರವಾಗಿದೆ ಮತ್ತು ಅವಮಾನವಾಗಿದೆ. ತೆನ್ನಿರ ಮೈನಾ ಅವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಇವರ ಮೊಬೈಲ್ ಫೋನ್ ವಶಕ್ಕೆ ಪಡೆದಿಲ್ಲ ಎಂದು ಆರೋಪಿಸಿದರು.
ಕಳೆದ ಚುನಾವಣೆ ಸಂದರ್ಭ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಕಾಂಗ್ರೆಸ್‍ನ ಮೈನಾ ಅವರು ಸಮಾಜದಲ್ಲಿ ಅಶಾಂತಿ ಮೂಡಿಸುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದರು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಬಿಜೆಪಿಗೊಂದು ಕಾನೂನು ಕಾಂಗ್ರೆಸ್‍ಗೆ ಒಂದು ಕಾನೂನು ಇದೆಯೇ ಎಂದು ಉಮೇಶ್ ಸುಬ್ರಮಣಿ ಪ್ರಶ್ನಿಸಿದರು.
ಪ್ರಚೋದನಾಕಾರಿ ಸಂದೇಶ ರವಾನಿಸುತ್ತಿರುವ ತೆನ್ನಿರ ಮೈನಾ ಅವರ ವಿರುದ್ಧ ಸೈಬರ್ ಅಪರಾಧ ಪ್ರಕರಣ ದಾಖಲಿಸಿಕೊಳ್ಳಬೇಕು ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದರು.
::: ಮಗುವನ್ನು ಚಿವುಟಿದ್ದಾರೆ :::
ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮಗುವನ್ನು ಚಿವುಟಿ ಸಮಾಧಾನಪಡಿಸುವ ಯತ್ನ ಮಾಡಿದ್ದಾರೆ. ಶಾಸಕರ ಕುಮ್ಮಕ್ಕಿನಿಂದಲೇ ಕಾಂಗ್ರೆಸಿಗರು ಬಿಜೆಪಿ ಕಾರ್ಯಕರ್ತರ ತೇಜೋವಧೆ ಮಾಡಿದ್ದಾರೆ. ಅಲ್ಲದೆ, ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ಪೊಲೀಸರು ವಿನಾಕರಣ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ಪೂರ್ಣಗೊಳಿಸಲಿ ಎಂದು ಶಾಸಕರು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ. ಪೊಲೀಸರೇ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿರುವುದರಿಂದ ಸರ್ಕಾರವೇ ಇದನ್ನು ಸುಖಾಂತ್ಯಗೊಳಿಸಬೇಕೆ ಹೊರತು ಪೊಲೀಸರಿಂದ ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡಿರುವ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿರುವುದು ಖಂಡನೀಯ ಎಂದು ಉಮೇಶ್ ಸುಬ್ರಮಣಿ ಹೇಳಿದರು.
ಕಾಂಗ್ರೆಸ್‍ನ ಬೆದರಿಕೆ ತಂತ್ರಗಳಿಗೆ ಬಿಜೆಪಿ ಎಂದಿಗೂ ಮಣಿಯುವುದಿಲ್ಲ. ಬಿಜೆಪಿಯ ಜನಪರ ಹೋರಾಟ ಇನ್ನು ಮುಂದೆಯೂ ಮುಂದುವರೆಯಲಿದೆ ಎಂದರು.
ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ಲೋಕಸಭೆ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದನ್ನು ಸಹಿಸದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್ ಹಾಗೂ ಹಾಲಿನ ಬೆಲೆಯನ್ನು ಏರಿಕೆ ಮಾಡಿ ಜನರ ಮೇಲೆ ಗದಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿದರು.
ಬೆಲೆ ಏರಿಕೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ, ಸರ್ಕಾರ ತನ್ನ ಧೋರಣೆಯನ್ನು ಬದಲಾಯಿಸಿಕೊಳ್ಳದಿದ್ದಲ್ಲಿ ನಿರಂತರ ಪ್ರತಿಭಟನೆ ನಡೆಸಲಾಗುವುದು. ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದ್ದು, ಮುಖ್ಯಮಂತ್ರಿಗಳು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಕವನ್ ಕಾವೇರಪ್ಪ, ಯುವ ಮೋರ್ಚಾ ಅಧ್ಯಕ್ಷ ಪಾಂಡಿರ ಪೂಣಚ್ಚ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪಿ.ಜಿ.ಗಜೇಂದ್ರ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿ.ಬಿ.ಸೌಮ್ಯ ಉಪಸ್ಥಿತರಿದ್ದರು.
Breaking News
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*