ಮಡಿಕೇರಿ ಜು.1 NEWS DESK : ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ಮೂಲದ ಶಶಿ (30) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪ್ರವಾಸಿತಾಣಗಳನ್ನು ವೀಕ್ಷಿಸಲೆಂದು ಮೈಸೂರಿನಿಂದ ಸುಮಾರು 15 ಮಂದಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ.
ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹದ ಶೋಧ ಕಾರ್ಯ ನಡೆದಿದೆ.