ಮಡಿಕೇರಿ ಜು.1 NEWS DESK : ಪ್ರಸಕ್ತ (2024-25) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿ.ಯು.ಸಿ. ಮತ್ತು ಪಿಯುಸಿ. ಸಮನಾಂತರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://shp.karnataka.gov.in/bcwd ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಕೆಳಕಂಡಂತಿದೆ. ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ: 08272-295628, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ :9844531040, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ: 9481772143 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*