ಮಡಿಕೇರಿ ಜು.1 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಬಹುತೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.










