ನಾಪೋಕ್ಲು ಜು.1 NEWS DESK : ಕೊಡಗು ಜಿಲ್ಲಾ ಪೊಲೀಸ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಹಾಗೂ ಎನ್.ಸಿ.ಸಿ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು.
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪದವಿ ಪೂರ್ವ ಕಾಲೇಜಿನಿಂದ ಮೂರ್ನಾಡು ಪಟ್ಟಣದಲ್ಲಿ ಜಾಥಾ ನಡೆಸಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಮೂರ್ನಾಡು ಪಟ್ಟಣದಲ್ಲಿ ವಿದ್ಯಾರ್ಥಿಗಳು ಕಲಾವೇದಿಕೆ, ಕುಶಾಲನಗರ ತಂಡ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗೆ ಮೂರ್ನಾಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಪ್ರತಿಜ್ಞಾವಿಧಿ ಬೋಧಿಸಿದರು. ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ, ಎನ್ ಸಿಸಿ ಅಧಿಕಾರಿ ಕಾವೇರಪ್ಪ, ಪ್ರಾಂಶುಪಾಲರಾದ ದೇವಕಿ, ಉಪನ್ಯಾಸಕಿ ರೋಹಿಣಿ, ಶಿಕ್ಷಕಿ ಉಷಾ, ರಶ್ಮಿ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ