ಪುತ್ತೂರು ಜು.1 NEWS DESK : ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅದರಲ್ಲಿಯೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸತನಕ್ಕೆ ತೆರೆದುಕೊಳ್ಳುತ್ತಲೇ ಇರುತ್ತಾರೆ. ಬದಲಾದ ತಾಂತ್ರಿಕತೆಯೊಂದಿಗೆ ಹೆಜ್ಜೆ ಹಾಕುತ್ತಾ ತನ್ನಲ್ಲಿರುವ ತಾಂತ್ರಿಕ ಜ್ಞಾನವನ್ನು ಇತರರಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆ ನೀಡುವುದಕ್ಕಾಗಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅನ್‍ಬೌಂಡ್ ಎನ್ನುವ 3 ದಿನಗಳ ತಾಂತ್ರಿಕ ಉತ್ಸವ ಕಾರ್ಯಕ್ರಮ ನಡೆಯಿತು.
ರೀಸರ್ಚ್ ಎಂಡ್ ಪ್ರೆಸೆಂಟೇಶನ್, ಪ್ರಾಬ್ಲೆಮ್ ಸಾಲ್ವಿಂಗ್, ಮೆಷಿನ್ ಲರ್ನಿಂಗ್, ಡೇಟಾ ಪ್ರಾಸೆಸಿಂಗ್, ಸರ್ಕ್ಯೂಟ್ ಡಿಸೈನ್ ಎಂಡ್ ಡಿಬಗ್ಗಿಂಗ್, ಸರ್ವೆ, ಮಾಡೆಲಿಂಗ್, ಯುನಿಟ್ಸ್ ಎಂಡ್ ಮೆಶರ್‍ಮೆಂಟ್ಸ್ ಹೀಗೆ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ 4, ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ 2, ಸಿವಿಲ್ ವಿಭಾಗದಲ್ಲಿ 2, ಮೆಕ್ಯಾನಿಕಲ್ ವಿಭಾಗದಲ್ಲಿ 2 ಹಾಗೂ ಎಲ್ಲಾ ವಿಭಾಗಗಳಿಗೆ ಸಂಬಂಧಿಸಿದಂತೆ 1 ಹೀಗೆ ಒಟ್ಟು 11 ವಿಷಯಗಳಲ್ಲಿ ವಿವಿಧ ತಾಂತ್ರಿಕ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮವನ್ನು ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಅಡ್ವಾನ್ಸ್ಡ್ ಮೈಕ್ರೋ ಡಿವೈಸಸ್ ಸಂಸ್ಥೆಯಲ್ಲಿ ಸಿಲಿಕಾನ್ ಡಿಸೈನ್ ಇಂಜಿನಿಯರ್ ಆಗಿರುವ ಪ್ರಮೋದ್ ಬಾಳಿಗಾ ಉದ್ಘಾಟಿಸಿದರು. ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಸತ್ಯನಾರಾಯಣ ಭಟ್ ಪ್ರಾಂಶುಪಾಲ ಡಾ,ಮಹೇಶ್‍ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯ ದಿನ ನಡೆದ ಸಮಾರೋಪ ಸಮಾರಂಭದಲ್ಲಿ ಎಲ್‍ಟಿಐ ಮೈಂಡ್‍ಟ್ರೀ ಸಂಸ್ಥೆಯ ಹಿರಿಯ ನಿರ್ದೇಶಕ ಕೃಷ್ಣಮೂರ್ತಿ ಪಟ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ವಿದ್ಯಾ.ಆರ್.ಗೌರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಪ್ರಾಂಶುಪಾಲ ಡಾ,ಮಹೇಶ್‍ಪ್ರಸನ್ನ.ಕೆ ಕಾರ್ಯಕ್ರಮ ಸಂಯೋಜಕ ಆರ್ಟಿಫೀಶಿಯಲ್ ಇಂಟೆನಿಜೆನ್ಸ್ ವಿಭಾಗದ ಮುಖ್ಯಸ್ಥ ಡಾ.ಗೋವಿಂದರಾಜ್.ಪಿ, ವಿದ್ಯಾರ್ಥಿ ಸಂಯೋಜಕ ರವಿನಾರಾಯಣ.ಕೆ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೂರುದಿನಗಳ ಕಾಲ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಎನ್.ಅಭಯರಾಜ್ ಭಟ್, ಡಿ.ಅಪೇಕ್ಷಾ, ಪಿ.ಕೆ.ಮಹೇಶ್, ಎಮ್.ಎನ್.ಪ್ರಜ್ಞಾಶಂಕರಿ, ಸಾತ್ವಿಕ್, ಎಸ್.ಜೀವಿತ್, ಡಿ.ವಿ.ಶ್ರೀನಿಧಿ, ಎಂ.ಶ್ರೀನಿವಾಸ್ ಹೆಗ್ಡೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*