ಮಡಿಕೇರಿ ಜು.1 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳ ಒಕ್ಕೂಟ “ಅವಿನ್ಯಂ” ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ “ಕೆರಿಯರ್ ಕ್ರಾಫ್ಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಶುಪಾಲರಾದ ಡಾ. ಎಂ.ಬಸವರಾಜ್, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನಗಳಲ್ಲಿ ಭಾಗವಹಿಸುವಾಗ ಆತ್ಮವಿಶ್ವಾಸವು ಹೆಚ್ಚುತ್ತದೆ ಎಂದರು. ಈ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ತಮ್ಮ ಕೌಶಲ್ಯಾಭಿವೃದ್ಧಿಗಾಗಿ ಬಳಸುವಂತೆ ಸಲಹೆ ನೀಡಿದರು.
ಮೈಸೂರಿನ ಜೆ.ಕೆ.ಟಯರ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಕಲ್ಪ ಪೂಣಚ್ಚ ವಿದ್ಯಾರ್ಥಿಗಳಿಗೆ ಅಣುಕು ಸಂದರ್ಶನಗಳನ್ನು ಮಾಡುವುದರ ಮೂಲಕ ಹೇಗೆ ಸಂದರ್ಶನಗಳಲ್ಲಿ ಭಾಗವಹಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಎಐ ಎಂಡ್ ಎಂಎಲ್ ವಿಭಾಗ ಮುಖ್ಯಸ್ಥರಾದ ಡಾ. ಬಿ.ಬಿ.ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಕಾರ್ಯಾಗಾರವನ್ನು ಸಂಪೂರ್ಣವಾಗಿ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಬಳಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗೀಯ ಮುಖ್ಯಸ್ಥರುಗಳು, ಪ್ರಾದ್ಯಾಪಕ ವೃಂದದವರು ಹಾಜರಿದ್ದರು. ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಎಂ.ಮುರಳೀಧರ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ನೀಲಮ್ ನಿರೂಪಿಸಿದರು, ವೆನ್ನೆಲ ವಂದಿಸಿದರು.