ಮಡಿಕೇರಿ ಜು.1 NEWS DESK : ರಾಜ್ಯದಲ್ಲಿ ಕನ್ನಡಿಗರಿಗೆ ಎಲ್ಲಾ ಮಾದರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಟಿ.ಎ.ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಕರವೇ ಜಿಲ್ಲಾಧ್ಯಕ್ಷ ಕೆ.ಎಸ್.ದೀಪಕ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಪ್ರದೀಪ್ ಕರ್ಕೇರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ವೇದಿಕೆಯ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳ ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಹೊರರಾಜ್ಯದಿಂದ ಬಂದು ನೆಲೆಸಿರುವವರಿಗೆ ಸಿಗುವ ಉದ್ಯೋಗ ಮಾನ್ಯತೆ ಕನ್ನಡಿಗರಿಗೆ ಇಲ್ಲದಂತಾಗಿದೆ.ಇದರಿಂದ ನಾಡಿನ ಜನತೆ ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿದೆ ಎಂದರು.
ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರಿಗೆ ಸಲ್ಲಿಸಿದರು.