ಮಡಿಕೇರಿ ಜು.1 NEWS DESK : ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಆರ್ದ್ರಾ ಮಳೆ ಕೊಡಗಿನಲ್ಲಿ ಮತ್ತೆ ಬಿರುಸುಗೊಂಡಿದೆ. ವಿರಾಜಪೇಟೆ ಮತ್ತು ಭಾಗಮಂಡಲ ಭಾಗದಲ್ಲಿ ಕಳೆದ 24 ಗಂಟೆಗಳಲ್ಲಿ ಅಧಿಕ ಮಳೆಯಾಗಿದೆ.
ಹಗಲಿನ ವೇಳೆ ಕೊಂಚ ಬಿಡುವು ನೀಡುವ ಮಳೆ ರಾತ್ರಿ ಬಿರುಸುಗೊಳ್ಳುತ್ತಿದೆ. ವಿರಾಜಪೇಟೆಯಲ್ಲಿ 5 ಇಂಚು ಮತ್ತು ಭಾಗಮಂಡಲದಲ್ಲಿ 4 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ತಾಲ್ಲೂಕು ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಮಡಿಕೇರಿ ನಗರದಲ್ಲಿ ಮಂಜು ಮತ್ತು ಚಳಿಯ ವಾತಾವರಣ ಮುಂದುವರೆದಿದೆ. ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಮಾಡು ಗ್ರಾಮದ ಕುದನೆಕೊಡಿರ ಮಣಿ ಬೆಳ್ಳಿಯಪ್ಪ ಎಂಬುವವರ ಮನೆಯ ಗೋಡೆ ಭಾರೀ ಮಳೆಯ ಪರಿಣಾಮ ಕುಸಿದು ಬಿದ್ದಿದೆ. ನಿಟ್ಟೂರು ಗ್ರಾ.ಪಂ ಕಾರ್ಮಾಡು ವಾರ್ಡ್ ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು ಹಾಗೂ ಕಾಟಿಮಾಡ ಶರೀನ್ ಮುತ್ತಣ್ಣ ಅವರು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಗೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸುರಿದ ಮಳೆಗೆ ವಿರಾಜಪೇಟೆ ನಗರದಲ್ಲಿ ಬರೆ ಕುಸಿದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮಣ್ಣು, ಕಲ್ಲು ಬಿದ್ದು ಹಾನಿಯಾಗಿದೆ. ಪುರಸಭಾ ಸದಸ್ಯರಾದ ರಾಜೇಶ್ ಪದ್ಮನಾಭ, ಮುಖ್ಯಾಧಿಕಾರಿ ಚಂದ್ರ ಕುಮಾರ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯ ವಿವಿಧೆಡೆ ಬರೆ ಕುಸಿದ ಘಟನೆಗಳು ನಡೆದಿದೆ. ಗ್ರಾಮೀಣ ಭಾಗದಲ್ಲಿ ಮಳೆಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.
::: ಮಳೆ ವಿವರ :::
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 61.09 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.49 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 848.14 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 278.39 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 66.55 ಮಿ.ಮೀ. ಕಳೆದ ವರ್ಷ ಇದೇ ದಿನ 23.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1227.23 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 499.41 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 106.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 889.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 206.61 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 43.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 841.68 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 196.89 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.85 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 659.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 205.66 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 622.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 283.40 ಮಿ.ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 64.20, ನಾಪೋಕ್ಲು 48.40, ಸಂಪಾಜೆ 48, ಭಾಗಮಂಡಲ 105.60, ವಿರಾಜಪೇಟೆ 124.40, ಅಮ್ಮತ್ತಿ 89.50, ಹುದಿಕೇರಿ 44.40, ಶ್ರೀಮಂಗಲ 32, ಪೊನ್ನಂಪೇಟೆ 48, ಬಾಳೆಲೆ 50, ಸೋಮವಾರಪೇಟೆ ಕಸಬಾ 55.60, ಶನಿವಾರಸಂತೆ 30, ಶಾಂತಳ್ಳಿ 85, ಕೊಡ್ಲಿಪೇಟೆ 24, ಕುಶಾಲನಗರ 31, ಸುಂಟಿಕೊಪ್ಪ 48 ಮಿ.ಮೀ.ಮಳೆಯಾಗಿದೆ.
::: ಹಾರಂಗಿ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2838.42 ಅಡಿಗಳು. ಕಳೆದ ವರ್ಷ ಇದೇ ದಿನ 2820.69 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 44.20 ಮಿ.ಮೀ.,ಕಳೆದ ವರ್ಷ ಇದೇ ದಿನ 5.80 ಮಿ.ಮೀ., ಇಂದಿನ ನೀರಿನ ಒಳಹರಿವು 1673 ಕ್ಯುಸೆಕ್, ಕಳೆದ ವರ್ಷ ಇದೇ ದಿನ 357 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
Breaking News
- *ಜ.5 ರಂದು ಪತ್ರಕರ್ತರ ಕ್ರಿಕೆಟ್ ಕಲರವ : ಆಟಗಾರರ ಪಟ್ಟಿ ಬಿಡುಗಡೆ*
- *ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆ : ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಸಿವಿಲ್ ನ್ಯಾಯಾಧೀಶೆ ಶುಭ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ : ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ : ನ್ಯಾಯಾಧೀಶ ಹೊಸಮನಿ ಪುಂಡಲೀಕ ಸಲಹೆ*
- *ಬಸವನಹಳ್ಳಿ ವಸತಿ ಶಾಲೆಯಲ್ಲಿ ನಾಟಕ ಶಿಬಿರ*
- *ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ*
- *ಚಿರತೆ ಸೆರೆಗೆ ಸೂಚನೆ*
- *ಕರಿಕೆ- ಭಾಗಮಂಡಲ ಹೆದ್ದಾರಿ ಕಾಮಗಾರಿಗೆ ಚಾಲನೆ : ಮೂಲಭೂತ ಸೌಲಭ್ಯ ಒದಗಿಸುವ ಭರವಸೆ ನೀಡಿದ ಶಾಸಕ ಪೊನ್ನಣ್ಣ*
- *ಮೂರ್ನಾಡಿನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ*
- *ಪ್ರಧಾನಿಯನ್ನು ಭೇಟಿಯಾದ ಸಿಎಂ, ಡಿಸಿಎಂ : ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ*
- *ಅಭಿವೃದ್ದಿಯಲ್ಲಿ ರಾಜಕಾರಣ ಮಾಡಲಾರೆ : ಶಾಸಕ ಎ.ಎಸ್.ಪೊನ್ನಣ್ಣ*