ವಿರಾಜಪೇಟೆ ಜು.2 NEWS DESK : ಪಟ್ಟಣದ ಮಗ್ಗುಲ ದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಕಾರ್ಯದರ್ಶಿ ಪ್ರತಿಮಾ ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗಿಡಗಳನ್ನು ನೆಟ್ಟು ಬೆಳೆಸುದರಿಂದ ಮುಂದಿನ ಪೀಳಿಗೆಗೆ ನಾವು ಕೊಡುಗೆ ನೀಡಿದಂತಾಗುತ್ತದೆ ಎಂದರು. ಶಿಕ್ಷಕಿ ಕೀರ್ತನ ಸ್ವಾಮಿ ವನಮಹೋತ್ಸವ ಆಚರಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು.
ನಂತರ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಕುರಿತು ಸಂಸ್ಥೆಯ ವತಿಯಿಂದ ಪ್ರತಿಜ್ಞೆ ಮಾಡಲಾಯಿತು. ಶಾಲಾ ವಿದ್ಯಾರ್ಥಿನಿ ಮರದ ವೇಷ ಭೂಷಣದಲ್ಲಿ ಎಲ್ಲರ ಗಮನ ಸೆಳೆದಳು.
ಶಾಲಾ ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ, ಶಿಕ್ಷಕರು, ಸಿಬ್ಬಂದಿಗಳು, ಮಕ್ಕಳು ಹಾಜರಿದ್ದರು.