ನಾಪೋಕ್ಲು ಜು.2 NEWS DESK : ಹಲವಾರು ಸಮಾಜಮುಖಿ ಕೆಲಸ ಮಾಡುತ್ತಿರುವ ಪುನಶ್ಚೇತನ ಸಂಸ್ಥೆಯ ಕಾರ್ಯ ಸಮಾಜಕ್ಕೆ ಮಾದರಿ ಎಂದು ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಬೇಬ ಹೇಳಿದರು.
ಪುನಶ್ಚೇತನ ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆ ವತಿಯಿಂದ ಹೆಣ್ಣು ಮಕ್ಕಳಿಗೆ ಆಯೋಜಿಸಲಾಗಿದ್ದ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ, ಮಹಿಳೆಯರ ಅಭಿವೃದ್ಧಿಗಾಗಿ ಸಂಸ್ಥೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಪದಾಧಿಕಾರಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾ.ಪಂ ಸದಸ್ಯ ಬಿ.ಎಂ.ಪ್ರತೀಪ ಮಾತನಾಡಿ, ವಿಶೇಷ ಮಕ್ಕಳನ್ನ ಮುಖ್ಯವಾಹಿನಿಗೆ ತರುವುದರ ಜೊತೆಗೆ ಬಡಹೆಣ್ಣು ಮಕ್ಕಳಿಗೆ ಸ್ವಾವಲಂಬನೆ ಜೀವನ ನಡೆಸಲು ಟೈಲರಿಂಗ್ ತರಬೇತಿ ಕೊಡುವುತ್ತಿರುವುದು ಒಳ್ಳೆಯ ಉತ್ತಮ ವಿಚಾರ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಬೊಪ್ಪಂಡ ಸೂರಜ್ ಗಣಪತಿ ಮತ್ತು ಬಾಳೆಯಡ ದಿವ್ಯ ಮಂದಪ್ಪ, ತರಬೇತಿ ಶಿಕ್ಷಕಿ ಅಶ್ವಿನಿ, ಸಂಸ್ಥೆಯ ಶಿಕ್ಷಕಿ ಅಸ್ಮ , ವಿಶೇಷ ಮಕ್ಕಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ