ಮಡಿಕೇರಿ ಜು.2 NEWS DESK : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯದ ನಿವೃತ್ತ ಡೆಪ್ಯೂಟಿ ಮಾನೈಜಿಂಗ್ ಡೈರೆಕ್ಟರ್ ಕಂಜಿತಂಡ ಸ್ವಾತಿ ಸುಬ್ರಮಣಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿ ನಾಯಕರ ಜವಬ್ದಾರಿಯ ಬಗ್ಗೆ ತಿಳಿಸಿ, ಉತ್ತಮ ನಾಗರಿಕರಾಗಬೇಕು ಎಂದರು. ಬದುಕಿನಲ್ಲಿ ಮೇಲೆ ಬರುವ ಪ್ರಯತ್ನ ಪಡಬೇಕು, ತಂದೆ – ತಾಯಿಗಳ ಬಗ್ಗೆ ಗೌರವ ಇರಬೇಕು ಎಂದ ಅವರು, ಶಾಲಾ ದಿನಗಳ ಮೆಲುಕು ಹಾಕಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಕೊಡವ ಸಮಾಜ ಹಾಗೂ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಶಾಲಾ ನಾಯಕರುಗಳು ಜವಾಬ್ದಾರಿ ವಹಿಸಿ ಕೆಲಸ ಮಾಡಿ ಪ್ರತಿಭೆಯನ್ನು ಪ್ರದರ್ಶಿಸಬೇಕು. ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಆ ಮೂಲಕ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಬೋಧಕ ಹಾಗೂ ಬೋಧಕೇತರ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವಿಜ್ಞಾನ ಸಂಘವನ್ನು ಮಡಿಕೇರಿ ಕೊಡವ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಕಲಾ ಸಂಘವನ್ನು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಸಂಚಾಲಕ ಕನ್ನಂಡ ಕವಿತಾ ಕಾವೇರಮ್ಮ, ವಾಣಿಜ್ಯ ಸಂಘವನ್ನು ಶಾಲೆಯ ಕಾರ್ಯಾಧ್ಯಕ್ಷರಾದ ಕೇಕಡ ಎ. ದೇವಯ್ಯ, ಸಾಹಿತ್ಯ ಸಂಘವನ್ನು ಶಾಲಾ ಆಡಳಿತ ಮಂಡಳಿ ಸದಸ್ಯೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಕ್ವಿಜ್ ಸಂಘವನ್ನು ಸದಸ್ಯರಾದ ಕಾಳಚಂಡ ಎಂ.ಅಪ್ಪಣ್ಣ ಉದ್ಘಾಟಿಸಿದರು.
ವಿವಿಧ ವಿಭಾಗಗಳ ನಾಯಕರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಹಾಗೂ ಶಾಲಾ ಅಧ್ಯಕ್ಷರು ಪದಕ ಪ್ರದಾನ ಮಾಡಿದರು. ನಂತರ ಶಾಲಾ ಪ್ರಾಂಶುಪಾಲರಾದ ಎಂ.ಜಿ .ಸವಿತ ವಿದ್ಯಾರ್ಥಿ ಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.