ಮಡಿಕೇರಿ ಜು.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ `ವಚನ ಸಂರಕ್ಷಣಾ ದಿನಾಚರಣೆ’ಯು ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪನ್ಯಾಸಕರಾದ ಎಚ್.ಎಲ್.ರಮೇಶ್ ಡಾ.ಫ.ಗು.ಹಳಕಟ್ಟಿ ವಚನ ಪುಸ್ತಕಗಳು ಹಾಗೂ ಪುಸ್ತಕ ಬಂಡಾರವನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.
ಉಪನ್ಯಾಸಕರಾದ ವೆಂಕಟ್ ನಾಯಕ್ ಮಾತನಾಡಿ, ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯ ಸಂಗ್ರಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ವಚನ ಸಾಹಿತ್ಯ ಸಂಗ್ರಹಣೆಯಲ್ಲಿ ಸಾವಿರ ವಚನಗಳನ್ನು ರಚಿಸಿದ್ದಾರೆ. ಜೇಡರ ದಾಸಿಮಯ್ಯ ಅವರು ಕನ್ನಡದಲ್ಲಿ ಮೊದಲ ವಚನಕಾರ ಶಿವಾನುಭವ ಸಂಗ್ರಹದ ಲೇಖಕರು ಆಗಿದ್ದಾರೆ ಎಂದರು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಅವರು ಮಾತನಾಡಿ ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಹೆಬ್ಬಾಲೆ ಪ್ರೌಢಶಾಲೆಯ ಶಿಕ್ಷಕರಾದ ಲೋಕೇಶ್, ಅನಂತ್, ಇತರರು ಇದ್ದರು.