ಮಡಿಕೇರಿ ಜು.2 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಕಾರ್ಮಿಕ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್, ಸರ್ಕಾರ ಮತ್ತು ಇಲಾಖೆಗಳಿಂದ ಲಭ್ಯವಾಗುವ ಸೌಲಭ್ಯಗಳನ್ನು ಕಾರ್ಮಿಕರಿಗೆ ಒದಗಿಸುವ ನಿಟ್ಟಿನಲ್ಲಿ ಘಟಕದ ಬ್ಲಾಕ್ ಅಧ್ಯಕ್ಷರುಗಳು ಶ್ರಮವಹಿಸಬೇಕು, ಕಾರ್ಮಿಕರು ಕೆಲಸ ನಿರ್ವಹಿಸುವ ಸಂದರ್ಭ ಉಂಟಾಗುತ್ತಿರುವ ಅನಾನುಕೂಲತೆಗಳ ಬಗ್ಗೆಯೂ ಗಮನಹರಿಸಬೇಕಿದೆ ಎಂದು ಕರೆ ನೀಡಿದರು.
ಸರ್ಕಾರದಿಂದ ಡೆಲಿವರಿ ಬಾಯ್, ಹಾಲು, ಪೇಪರ್ ವಿತರಣಾ ಸಿಬ್ಬಂದಿಗಳಿಗೆ ನೀಡಿರುವ ಅಪಘಾತ ವಿಮಾ ಕಾರ್ಡ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ಕಟ್ಟಡ ಕಾರ್ಮಿಕರು ತಮ್ಮ ಎಲ್ಲಾ ಕಾರ್ಡ್‍ಗಳನ್ನು ನವೀಕರಣಗೊಳಿಸಬೇಕು, ತೋಟದ ಕೂಲಿ ಕಾರ್ಮಿಕರು ಕಡ್ಡಾಯವಾಗಿ ಇ-ಶ್ರಮ್ ಕಾಡ್‍ಗಳನ್ನು ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಪೊನ್ನಂಪೇಟೆ ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪೊನ್ನಂಪೇಟೆ ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷೆ ಮಂಜುಳಾ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್, ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ಮಿರ್ಶದ್ ಪರವಂಡ, ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಜೆಗುಂಡಿ, ಸಹ ಕಾರ್ಯದರ್ಶಿ ಸ್ವಾಮಿ, ಕಾರ್ಯದರ್ಶಿ ಚಂದ್ರಿಕಾ, ವಸಂತ್ ಕುಮಾರ್, ಪೊನ್ನಂಪೇಟೆ ಬ್ಲಾಕ್ ಕಾರ್ಮಿಕ ಘಟಕದ ಉಪಾಧ್ಯಕ್ಷ ಮಹದೇವ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಹಮ್ಮದ್ ಆಲಿ, ಮಡಿಕೇರಿ ನಗರ ಕಾರ್ಮಿಕ ಘಟಕದ ಅಧ್ಯಕ್ಷೆ ಬೇಬಿ, ಪ್ರಮುಖರಾದ ಸಬ್ರಮಣಿ, ಪ್ರಕಾಶ್, ಅನುರಾಧ, ಚಂದ್ರಾವತಿ, ಅನು ಮತ್ತಿತರರು ಹಾಜರಿದ್ದರು.