ಮಡಿಕೇರಿ ಜು.2 NEWS DESK : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಂಗಡಿ ಮತ್ತು ದೇವಾಲಯದ ಹುಂಡಿ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಾಪೋಕ್ಲು ಸಮೀಪದ ನಾಲಾಡಿ ಗ್ರಾಮದ ನಿವಾಸಿ ಅಶೋಕ.ಕೆ.ಸಿ(35) ಎಂಬಾತನೇ ಬಂಧಿತ ಆರೋಪಿಯಾಗಿದ್ದು, 21.3 ಗ್ರಾಂ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಹೊರವಲಯದ ತಾಳತ್ಮನೆ ನಿವಾಸಿ ಭರತ್ ಎಂಬುವವರಿಗೆ ಸೇರಿದ ಕೋಳಿ ಮಾಂಸದ ಅಂಗಡಿ ಮತ್ತು ಜ್ಯೂಸ್ ಅಂಗಡಿಯಿAದ ಜೂ.5ರಂದು ರೂ.10 ಸಾವಿರ ನಗದು, 52 ಗ್ರಾಂ ಚಿನ್ನಾಭರಣ ಹಾಗೂ ಅಂಗಡಿಯ ಮುಂಭಾಗ ನಿಲ್ಲಿಸಿದ್ದ 1 ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತನಿಖೆ ಕೈಗೊಂಡ ಗ್ರಾಮಾಂತರ ಠಾಣಾ ಪೊಲೀಸರು ಜು.1ರಂದು ಆರೋಪಿ ಕೆ.ಸಿ.ಅಶೋಕನನ್ನು ಮಾಲು ಸಹಿತ ಬಂಧಿಸಿದ್ದಾರೆ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿಯಲ್ಲಿ ಅಂಗಡಿ ಕಳವು ಮಾಡಿರುವುದು ಹಾಗೂ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅರೆಕಾಡು ಗ್ರಾಮದಲ್ಲಿನ ಶ್ರೀಚಾಮುಂಡೇಶ್ವರಿ ದೇವಾಸ್ಥಾನದಲ್ಲಿ ಹುಂಡಿ ಕಳವು ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಉಮೇಶ್.ಯು, ಠಾಣಾಧಿಕಾರಿ ವೆಂಕಟ್, ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.