ಮಡಿಕೇರಿ ಜು.3 NEWS DESK : ಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಾಳಿ, ಮಳೆ, ಸಿಡಿಲು ಇಲ್ಲದಿದ್ದರೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಗಳು ನಿರಂತರವಾಗಿ ಕತ್ತಲೆಯಲ್ಲಿ ಮುಳುಗುತ್ತಿವೆ. ಇದರಿಂದಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡಚಣೆ ಉಂಟಾಗಿದೆ. ಚೆಸ್ಕಾಂ ಗೆ ದೂರು ನೀಡಿದರೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ತುರ್ತು ಸಹಾಯವಾಣಿಗೆ ಕರೆ ಮಾಡಿದರೆ ಯಾರೂ ಕರೆಯನ್ನು ಸ್ವೀಕರಿಸುತ್ತಿಲ್ಲ, ಒಂದು ವೇಳೆ ದೂರು ದಾಖಲಿಸಿಕೊಂಡರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚೆಸ್ಕಾಂ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ಗ್ರಾ.ಪಂ ಗೆ ದೂರು ನೀಡುತ್ತಿದ್ದಾರೆ. ವಿದ್ಯುತ್ ವ್ಯತ್ಯಯದ ಕುರಿತು ಅಧಿಕಾರಿಗಳ ಬಳಿ ಕೇಳಿದರೆ ಸಿಬ್ಬಂದಿಗಳ ಕೊರತೆ ಇದೆ ಎಂದು ಕಾರಣ ನೀಡುತ್ತಿದ್ದಾರೆ. ಜಿಲ್ಲಾಡಳಿತ ಈ ಹಿಂದೆ ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಭರವಸೆ ನೀಡಿತ್ತು. ಆದರೆ ಚೆಸ್ಕಾಂ ನಲ್ಲಿ ಶೇ.70 ರಷ್ಟು ಸಿಬ್ಬಂದಿಗಳ ಕೊರತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅನೇಕ ಸಿಬ್ಬಂದಿಗಳು ವರ್ಗಾವಣೆ ಪಡೆದು ಕೊಡಗು ಜಿಲ್ಲೆಯಿಂದ ತೆರಳಿದ್ದಾರೆ. ಇದರಿಂದಾಗಿ ಹಾನಿಗೊಳಗಾದ ವಿದ್ಯುತ್ ಮಾರ್ಗಗಳ ದುರಸ್ತಿ ಕಾರ್ಯ ಶೀಘ್ರ ಪೂರ್ಣಗೊಳ್ಳುತ್ತಿಲ್ಲ. ಕಿರುಗೂರು, ಮತ್ತೂರು ಮತ್ತು ಕೋಟೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳು ವಿದ್ಯುತ್ ಕೊರತೆಯಿಂದ ಕತ್ತಲೆಯಲ್ಲೇ ಕಾಲ ಕಳೆಯಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿರುವ ರಾಕೇಶ್ ದೇವಯ್ಯ ಸರ್ಕಾರ ಮಲೆನಾಡು ಜಿಲ್ಲೆ ಕೊಡಗಿಗೆ ಹೆಚ್ಚುವರಿ ಚೆಸ್ಕಾಂ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದ್ದಾರೆ. ವಿದ್ಯುತ್ ಸಮಸ್ಯೆಯನ್ನು ಶೀಘ್ರ ಬಗೆಹರಿಸದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*