ಮಡಿಕೇರಿ ಜು.3 NEWS DESK : ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ಚೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊಳೆನರಸೀಪುರ ಮೂಲದ ಸಂದೀಪ್ ಆರ್. (27) ಎಂಬಾತನೇ ಬಂಧಿತ ಆರೋಪಿ. ಇತ್ತೀಚೆಗೆ ಗೌಡಳ್ಳಿ ಗ್ರಾಮದ ನಿವಾಸಿ ಅಣ್ಣಯ್ಯ (76) ಅವರ ಮನೆಗೆ ರಾತ್ರಿ 8.30 ರ ಸುಮಾರಿನಲ್ಲಿ ನುಗ್ಗಿದ ಅಪರಿಚಿತ ವ್ಯಕ್ತಿ ಅಣ್ಣಯ್ಯ ಅವರು ತಲೆಗೆ ಧರಿಸಿದ್ದ ಮಂಕಿ ಕ್ಯಾಪ್ ಅನ್ನು ಹಿಂಭಾಗದಿAದ ಕಣ್ಣುಮುಚ್ಚುವಂತೆ ಎಳೆದು ಕುತ್ತಿಗೆಯಲ್ಲಿದ್ದ ಅಂದಾಜು 27 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಪಿಐ ಪ್ರೀತಂ ಡಿ. ಶ್ರೇಯಾಕರ್, ಶನಿವಾರಸಂತೆ ಪೊಲೀಸ್ ಠಾಣೆಯ ಪಿಎಸ್‌ಐ ಗೋವಿಂದ ರಾಜು, ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿAದ 27 ಗ್ರಾಂ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*