ಮಡಿಕೇರಿ ಜು.4 NEWS DESK : ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಚಿಕಿತ್ಸಕರಾಗಿದ್ದ ಡಾ.ಅನಿಲ್ ದವಾನ್ ಅವರಿಗೆ ಉತ್ತಮ ವೈದ್ಯ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ವೈದ್ಯ ರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಮತ್ತು ಅರೋಗ್ಯ ಸಚಿವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಇವರು, ಪ್ರಸ್ತುತ ಕೊಡಗು ಮತ್ತು ಹಾಸನ ಜಿಲ್ಲೆಯ ಆಹಾರ ಮತ್ತು ಗುಣಮಟ್ಟದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.










