
ಮಡಿಕೇರಿ ಜು.4 NEWS DESK : ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ನೂತನ ಎಂ.ಆರ್.ಐ ಸ್ಕ್ಯಾನಿಂಗ್ ಯಂತ್ರದ ಅಳವಡಿಕೆ ಕಾರ್ಯವು ಭರದಿಂದ ಸಾಗಿದ್ದು, ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ) ಸೇವೆಯು ಕೊಡಗಿನ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ಈ ಸೇವೆಯಿಂದ ಕೀಲು ಮತ್ತು ಮೂಳೆ ಸಮಸ್ಯೆ, ಹೃದಯ ರಕ್ತನಾಳಗಳ ಕಾಯಿಲೆಗಳನ್ನು ಗುರುತಿಸಲು, ಸ್ತನ ಕ್ಯಾನ್ಸರ್ ಅಪಾಯವನ್ನು ಗುರುತಿಸಲು, ಎಂಡೊಮೆಟ್ರಿಯಾಸೀಸ್ ಮತ್ತು ವಿವಿಧ ರೋಗಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.








