ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣು ಪ್ರಕಾಶ್ ಪಾಟೀಲ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಡಿಕೇರಿ ನಗರಸಭಾ ಸದಸ್ಯರಾದ ರಾಜೇಶ್ ಯಲ್ಲಪ್ಪ, ಕೆಪಿಸಿಸಿ ಸದಸ್ಯ ನಂದಕುಮಾರ್, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರುಗಳಾದ ಬಿ.ಎನ್.ಮುದ್ದುರಾಜ್, ಜಿ.ಸಿ.ಜಗದೀಶ್,ವಿಶಾಲ್ ನಂದಕುಮಾರ್ ಮಡಿಕೇರಿಯಲ್ಲಿ ಬರಮಾಡಿಕೊಂಡರು.