ಮಡಿಕೇರಿ ಜು.5 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜು.7 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ.
ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆಥ್ರ್ರೋಸ್ಕೋಫಿ ಮತ್ತು ಸ್ಪೋಟ್ರ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ.
ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್‍ಎನ್‍ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್) ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.