ಮಡಿಕೇರಿ ಜು.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜುಲೈ, 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ(ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹತ್ತಿರ) ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಜಿ.ಪಂ. ಆಡಳಿತಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಇತರರು ಪಾಲ್ಗೊಳ್ಳಲಿದ್ದಾರೆ.