ಮಡಿಕೇರಿ ಜು.5 NEWS DESK : ರಾಜ್ಯದ ಜೀವನದಿ ಕಾವೇರಿ ನದಿ ನೀರು ಮಲಿನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನಕ್ಕೆ ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿ ರಚಿಸಿ ರಾಜ್ಯ ಸರಕಾರ ಆದೇಶಿಸಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನಿರಂಜನ್ ಅಧ್ಯಕ್ಷತೆಯಲ್ಲಿ 9 ಮಂದಿ ಹಿರಿಯ ಅಧಿಕಾರಿಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದೆ. ಕಾವೇರಿ ನದಿಗೆ ಘನತ್ಯಾಜ್ಯ, ಕೈಗಾರಿಕಾ ತ್ಯಾಜ್ಯ ಸೇರ್ಪಡೆಯಿಂದ ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿದೆ. ಅಲ್ಲದೆ, ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ.
ಈ ಸಂಬಂಧ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದು ಸರಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ, ತುರ್ತು ಮಾರ್ಗೋಪಾಯಗಳನ್ನ ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ.