ಬೆಂಗಳೂರು, ಜು.5 NEWS DESK : ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಕಂದಕ ಸೃಷ್ಟಿಸುವಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಹಾಗೂ ತಿರುಚಿದ ಹೇಳಿಕೆಗಳನ್ನು ಹರಿಬಿಡುತ್ತಿರುವರ ವಿರುದ್ಧ ಕ್ರಮ ಜರುಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ವಿಧಾನಸೌಧದಲ್ಲಿ ಸೈಬರ್ ನೀತಿಗಳನ್ನು ರೂಪಿಸುವ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಈ ಸಂದರ್ಭ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ, ಪ್ರಣವ್ ಮೊಹಂತಿ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಗುಪ್ತದಳ ವಿಭಾಗದ ಎಡಿಜಿಪಿ ಶರತ್ ಚಂದ್ರ, ರವಿ ಕುಮಾರ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಮುಂತಾದವರು ಉಪಸ್ಥಿತರಿದ್ದರು.