ಮಡಿಕೇರಿ ಜು.5 NEWS DESK : ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೆಳೆಗಾರರೊಬ್ಬರು ಪಾರಾಗಿ ಜೀವ ಉಳಿಸಿಕೊಂಡ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಎಂಬುವವರೇ ಪ್ರಾಣ ಉಳಿಸಿಕೊಂಡ ವ್ಯಕ್ತಿ. ಶುಕ್ರವಾರ ಬೆಳಿಗ್ಗೆ ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ದಿಢೀರ್ ಆಗಿ ಗೀಳಿಡುತ್ತಾ ಪ್ರತ್ಯಕ್ಷವಾದ ಒಂಟಿಸಲಗ ಏಕಾಏಕಿ ಸುಭಾಷ್ ಅವರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಸುಭಾಷ್ ಅವರು ಕಿರುಚುತ್ತಾ ಓಡಿ ಹೋಗಿ ಗೇಟ್ ಮೂಲಕ ಮನೆಯ ಆವರಣ ಸೇರಿಕೊಂಡಿದ್ದಾರೆ. ಗ್ರಾಮಸ್ಥರು ಹಾಗೂ ನಾಯಿಗಳು ಜೋರಾಗಿ ಕಿರುಚಿಕೊಂಡ ಪರಿಣಾಮ ಕಾಡಾನೆ ಸುಭಾಷ್ ಅವರ ಮನೆಯ ಗೇಟ್ ಬಳಿಯಿಂದ ರಸ್ತೆ ದಾಟಿ ತೋಟವೊಂದರೊಳಗೆ ನುಸುಳಿತು. ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದ್ದು, ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಉಪ್ಪು ತೋಡು, ಕಂಬಿಬಾಣೆ, 7ನೇ ಹೊಸಕೋಟೆ, ಮತ್ತಿಕಾಡು, ಭೂತನಕಾಡು, ಕೆದಕಲ್, ಹೊರೂರು ಮತ್ತಿತರ ಭಾಗದಲ್ಲಿ ಹಗಲು ರಾತ್ರಿ ಎನ್ನದೆ ಕಾಡಾನೆಗಳು ಸಂಚರಿಸುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೂ ಯಾವುದೇ ಆತಂಕವಿಲ್ಲದೆ ಆನೆಗಳು ಗ್ರಾಮದಲ್ಲೇ ಬೀಡು ಬಿಟ್ಟಿವೆ. ಹೆದ್ದಾರಿಯ ಮೂಲಕವೂ ಕಾಡಾನೆಗಳ ಹಿಂಡು ಹಾದು ಹೋಗುತ್ತಿದ್ದು, ನಿತ್ಯ ವಾಹನಗಳಿಗೆ ಅಡಚಣೆಯಾಗುತ್ತಿದೆ. ಪರಿಸ್ಥಿತಿ ಕೈಮೀರುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿದ್ದು, ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.
Breaking News
- *ಸೋಮವಾರಪೇಟೆ : ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ*
- *ಸೋಮವಾರಪೇಟೆ : ಇಂದಿರಾ ಕ್ಯಾಂಟೀನ್ ಕಾಮಗಾರಿ ಅಪೂರ್ಣ : ಅಸಮಾಧಾನ*
- *ಡಿಜಿಟಲ್ ಸಾಕ್ಷರತೆ ಮಹಿಳೆಯರ ಬದುಕಿಗೆ ಸಹಕಾರಿಯಾಗಲಿದೆ : ಆನಂದ್ ಪ್ರಕಾಶ್ ಮೀನಾ*
- *ಸೋಮವಾರಪೇಟೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ದಿನಾಚರಣೆ*
- *ಸುಂಟಿಕೊಪ್ಪ : ಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರಿಗೆ ಶಿಕ್ಷೆ*
- *ಮಡಿಕೇರಿ : ನ.22 ರಂದು ಉದ್ಯೋಗ ಮೇಳ*
- *ನ.20 ರಂದು ಶಾಂತಳ್ಳಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿ : ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ : ಸಮವಸ್ತ್ರ ವಿತರಣೆ*
- *ರಾಷ್ಟ್ರೀಯ ಐಕ್ಯತಾ ದಿನ : ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ*
- *ಮಡಿಕೇರಿಯಲ್ಲಿ ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ*