ಮಡಿಕೇರಿ ಜು.6 NEWS DESK : ವಿವಿಧ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡೆಂಘಿ ಜ್ವರದ ಕುರಿತು ಜಾಗೃತಿ ಮೂಡಿಸಲು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಇ.ಒ.ಕೆ.ಸಿ ಅಪ್ಪಣ್ಣ ಕರೆ ನೀಡಿದ್ದಾರೆ.
ರಾಷ್ಟ್ರೀಯ ಡೆಂಗ್ಯೂ ದಿನದ ಪ್ರಯುಕ್ತ ವಿರಾಜಪೇಟೆ ತಾ.ಪಂ.ಸಾಮರ್ಥ್ಯ ಸೌಧದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ತಾಲ್ಲೂಕು ಮಟ್ಟದ ಆಡ್ವೊಕೆಸಿ ಕಾರ್ಯಾಗಾರ ಕುರಿತು ಮಾತನಾಡಿದರು.
ಪ್ರತಿ ವರ್ಷವು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತದೆ. ಆದರೆ ಕಳೆದ 3 ವರ್ಷಗಳಿಗಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚು ಕಂಡುಬಂದಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ತಡೆಯಲು ಸಹಕರಿಸಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಯತೀರಾಜ್ ರವರು ಕಾರ್ಯಗಾರದ ಕುರಿತು ಮಾತನಾಡಿ ಡೆಂಗ್ಯೂ ಜ್ವರ ಕಂಡುಬರುವುದು ನಿಂತ ನೀರಿನಿಂದ ಸೊಳ್ಳೆಗಳು ಉತ್ಪತಿಯಾಗಿ, ಹಗಲು ವೇಳೆಯಲ್ಲಿ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರವು ಬರುತ್ತಿದ್ದು, ಆದಷ್ಟು ಮನೆಯ ಸುತ್ತಮುತ್ತ ಸ್ವಚ್ಚ ಪರಿಸರವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಡೆಂಗ್ಯೂ ರೋಗದ ಲಕ್ಷಣಗಳು,ತಡೆಗಟ್ಟುವ ವಿಧಾನಗಳ ಹಾಗೂ ಜಾಗೃತಿಮೂಡಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಡೆಂಗ್ಯೂ ಜ್ವರದ ಲಕ್ಷಣಗಳು: ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂಭಾಗದಲ್ಲು ನೋವು , ಮಾಂಸಖಂಡದಲ್ಲಿ ಹಾಗೂ ಕೀಲುಗಳಲ್ಲಿ ವಿಪರೀತ ನೋವುಗಳು ಕಂಡುಬಂದಲ್ಲಿ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಎಂ.ಡಿ.ಶ್ರೀನಿವಾಸ್, ವಿರಾಜಪೇಟೆ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.