ಸೋಮವಾರಪೇಟೆ ಜು.6 NEWS DESK : ಡೆಂಗ್ಯೂ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.ಡೆಂಗ್ಯೂವನ್ನು ಹರಡುವ ಸೊಳ್ಳೆಗಳ ಉತ್ಪತ್ತಿ ಸ್ಥಾನವನ್ನು ನಾಶಗೊಳಿಸುವ ಬಗ್ಗೆ ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಅರಿವು ಮೂಡಿಸಲಾಯಿತು. ಸೊಳ್ಳೆಗಳ ಉಗಮವನ್ನು ತಡೆಗಟ್ಟುವುದು ಹಾಗೂ ಸುತ್ತಮುತ್ತಲ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭ ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯಾಧಿಕಾರಿ ಜಾಸೀಂ ಖಾನ್, ಆಸ್ಪತ್ರೆಯ ಆರೋಗ್ಯ ನಿರೀಕ್ಷಕ ಮಹೇಶ್, ಪ್ರವೀಣ್, ಅನಿತಾ ಸೇರಿದಂತೆ ಇತರರು ಹಾಜರಿದ್ದರು.










