ಸೋಮವಾರಪೇಟೆ ಜು.6 NEWS DESK : ಗಾಂಧಿನಗರದಲ್ಲಿರುವ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯದಲ್ಲಿ ಆಷಾಡ ಮಾಸದ ಪೂಜೆ ಆರಂಭಗೊಂಡಿದ್ದು, ಆ.2 ರವರೆಗೆ ಪ್ರತಿ ಮಂಗಳವಾರ ಮತ್ತು ಶುಕ್ರವಾರ ವಿಶೇಷ ಪೂಜೆ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ.
ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ ದೇವರಿಗೆ ಫಲಪಂಚಾಮೃತ ಅಭಿಷೇಕ ಸೇವೆ, ವಿಶೇಷ ದ್ರವ್ಯಗಳಿಂದ ಅಲಂಕಾರ ಸೇವೆ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗವಿರುತ್ತದೆ. ಆಷಾಡ ಮಾಸದ ಪ್ರತಿ ಶುಕ್ರವಾರ ಪೂರ್ವಾಹ್ನ 10.30 ರಿಂದ 12ರವರೆಗಿನ ರಾಹುಕಾಲದಲ್ಲಿ ನಿಂಬೆಹಣ್ಣಿನ ದೀಪ ಆರಾಧನೆ ಮತ್ತು ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಆ.2 ರಂದು ಆಷಾಡ ಮಾಸದ ಕೊನೆಯ ದಿನದ ಪೂಜೆ ಅಂಗವಾಗಿ ಅಮ್ಮನವರ ಸನ್ನಿಧಾನದಲ್ಲಿ ಸಂಜೆ 6 ಗಂಟೆಗೆ ರಂಗ ಪೂಜೆ, 7 ಗಂಟೆಗೆ ಮಹಾ ಮಂಗಳಾರತಿ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ ಎಂದು ಗಂಗಾಧರ್ ಮಾಹಿತಿ ನೀಡಿದ್ದಾರೆ.