ನಾಪೋಕ್ಲು ಜು.6 NEWS DESK : ಶಿಸ್ತನ್ನು ಬೆಳೆಸಿಕೊಳ್ಳಲು ಹಾಗೂ ಮಕ್ಕಳ ಸರ್ವಾಂಗೀಣ ಅಭಿವೃಧ್ಧಿಗೆ ಪೋಷಕರ, ಶಿಕ್ಷಕರ ಪಾತ್ರ ಬಹು ಮುಖ್ಯ ಎಂದು ಆಕ್ಸ್ ಫರ್ಡ್ ಶಾಲಾ ಮುಖ್ಯೋಪಾಧ್ಯಾಯಿನಿ ಕವಿತಾ ಹೇಳಿದರು.
ಕುಂಜಿಲದ ಆಕ್ಸ್ ಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕ – ಪೋಷಕರ ಸಭೆಯಲ್ಲಿ ಮಾತನಾಡಿ, ಮಕ್ಕಳ ಭವಿಷ್ಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಆಕ್ಸ್ ಫರ್ಡ್ ಶಾಲೆಯ ನಿರ್ವಾಹಕ ಅಧಿಕಾರಿ ಶಾಹಿದ್ ಅಲಿ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲು ಕಿವಿ ಮಾತು ಹೇಳಿದರು . ಸಭೆಯಲ್ಲಿ ಅಧ್ಯಾಪಕ ವೃಂದ ಹಾಗೂ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.