
ಸುಂಟಿಕೊಪ್ಪ ಜು.8 NEWS DESK : ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಪ್ರಸ್ತುತ ಸನ್ನಿವೇಶದಲ್ಲಿ ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿ, ಪರಿಸರ ಸಂರಕ್ಷಣೆಯು ನಮ್ಮೆಲ್ಲಾರ ಆದ್ಯ ಕರ್ತವ್ಯವಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದರು.
ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ -2024 ರ ಘೋಷವಾಕ್ಯವಾದ “ಭುಮಿಯ ಪುನರತ್ತಾನ ಹಾಗೂ ಮರುಭುಮಿ ತಡೆಗಟುವಿಕೆ” ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಅರಣ್ಯನಾಶದಿಂದಾಗಿ ಭೂಮಿ ಮರುಭೂಮಿಯಾಗುತ್ತಿರುವ ಬಗ್ಗೆ ಗಂಭೀರ ಸಮಸ್ಯೆಯ ಕುರಿತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿದರು. ನದಿಮೂಲ ಜಲಮೂಲಗಳು ಬರಿದಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.
ಅರಣ್ಯ ನಾಶದಿಂದಾಗಿ ಪ್ರಸ್ತುತವಾಗಿ ತಾಪಮಾನವು ದಿನದೀಮದ ದಿನಕ್ಕೆ ಏರುತ್ತಿರುವುದರಿಂz ಜೀವಸಂಕುಲದ ಉಳಿಯುವಿಕೆಗೆ ಮಾರಕವಾಗಿದೆ ಎಂದರು.
ಈ ಸಂದರ್ಭ ಕಾಲೇಜಿನ ಉಪನ್ಯಾಸಕಿಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.










