ಮಡಿಕೇರಿ ಜು.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ.
ಆ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ.2000 ನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಇದುವರೆಗೆ 1,15,229 ಮಂದಿ ಮಹಿಳೆಯರು ನೋಂದಣಿ ಮಾಡಿದ್ದು, ಇವರಲ್ಲಿ 1,14,056 ಮಂದಿ ಮಹಿಳೆಯರಿಗೆ ಮಂಜೂರಾಗಿ ಶೇ.98.98 ರಷ್ಟು ಸಾಧನೆ ಮಾಡಲಾಗಿದೆ.
ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ 30,341 ಮಂದಿ ಮಹಿಳೆಯರು ನೋಂದಣಿಯಾಗಿದ್ದು, ಇವರಲ್ಲಿ 30169 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.43 ರಷ್ಟು ಸಾಧನೆ ಮಾಡಲಾಗಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ 24,238 ಮಂದಿ ಮಹಿಳೆಯರು ಹೆಸರು ನೋಂದಾಯಿಸಿದ್ದು, ಇವರಲ್ಲಿ 24,124 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.99.53 ರಷ್ಟು ಸಾಧನೆ ಮಾಡಲಾಗಿದೆ.
ಕುಶಾಲನಗರ ತಾಲ್ಲೂಕಿನಲ್ಲಿ 22,108 ಫಲಾನುಭವಿಗಳು ನೋಂದಣಿಯಾಗಿದ್ದು, ಇವರಲ್ಲಿ 21,830 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.98.74 ರಷ್ಟು ಸಾಧನೆ ಮಾಡಲಾಗಿದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ 20,519 ಮಂದಿ ಮಹಿಳೆಯರು ಹೆಸರು ನೋಂದಾಯಿಸಿದ್ದು, ಇವರಲ್ಲಿ 20,194 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.98.42 ರಷ್ಟು ಸಾಧನೆ ಮಾಡಲಾಗಿದೆ.
ಹಾಗೆಯೇ ಪೊನ್ನಂಪೇಟೆ ತಾಲ್ಲೂಕಿನಲ್ಲಿ 18,023 ಮಂದಿ ಮಹಿಳೆಯರು ಹೆಸರು ನೋಂದಣಿಯಾಗಿದ್ದು, ಇವರಲ್ಲಿ 17,739 ಮಂದಿ ಮಹಿಳೆಯರಿಗೆ ಮಂಜೂರಾತಿ ದೊರೆತಿದ್ದು, ಶೇ.98.42 ರಷ್ಟು ಪ್ರಗತಿ ಸಾಧಿಸಲಾಗಿದೆ.
ಒಟ್ಟಾರೆ ಜಿಲ್ಲೆಯಲ್ಲಿ 79 ಮಂದಿಗೆ ಸೌಲಭ್ಯ ಪಾವತಿಗೆ ಬಾಕಿ ಇದ್ದು, ಕೊಡಗು ಜಿಲ್ಲೆಯಲ್ಲಿ 1094 ಮಂದಿ ಎನ್‍ಪಿಸಿಐ ಮತ್ತು ಇಕೆವೈಸಿ ಮಾಡಿಸಲು ಬಾಕಿ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ.