
ಮಡಿಕೇರಿ ಜು.9 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 50ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮೇಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಹಾಕತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಮೇಕೇರಿ ಗ್ರಾ.ಪಂ ಹಾಲಿ ಸದಸ್ಯ ಎಂ.ಯು.ಹನೀಫ್ ಮಾತನಾಡಿ ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನವನ್ನು ಅರ್ಥಪೂರ್ಣಗೊಳಿಸುವ ಉದ್ದೇಶದಿಂದ ಸ್ವಚ್ಛತಾ ಶ್ರಮದಾನದ ಮೂಲಕ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಇದೇ ಸಂದರ್ಭ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಜನ್ಮದಿನದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ಪಂಚಾಯಿತಿ ಸದಸ್ಯ ಕೀರ್ತನ್ ಕಾಂಗೀರ, ಕಾಂಗ್ರೆಸ್ ವಲಯ ಕಾರ್ಯದರ್ಶಿ ಎಂ.ಯು.ರಫೀಕ್ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.











