ಮಡಿಕೇರಿ ಜು.9 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಿತು.
ವಿರಾಜಪೇಟೆಯ ಸೇಂಟ್ ಆನ್ಸ್ ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.
ಮುಖ್ಯ ಅತಿಥಿಗಳಾಗಿ ಕೆಡಿಡಿಎ ಅಧ್ಯಕ್ಷ ಜೋಸೆಫ್ ಸ್ಯಾಮ್ ಪಾಲ್ಗೊಂಡು ಸರ್ಕಾರ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಿವುಡರ ಸಂಘಕ್ಕೆ ಅಪಾರ ಸೇವೆಸಲ್ಲಿಸಿದ ಹಿರಿಯ ಸದಸ್ಯ ಪ್ರಕಾಶ್, ರಾಜಮಣಿ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಭೆಯಲ್ಲಿ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಜೆ.ವಿ.ಮಹೇಶ್ ವರ್ಮ, ಡಿ.ಡಿ.ಡಬ್ಲ್ಯೂ ಅಧಿಕಾರಿ ಸಿ.ಪ್ರದಾನ್, ಜಿಲ್ಲಾ ಕಾರ್ಯದರ್ಶಿ ರಂಜಿತ್, ಉಪಾಧ್ಯಕ್ಷ ಶಂಕರ ನಾರಾಯಣ, ಖಜಾಂಚಿ ಸುರೇಶ್ ಸೇರಿದಂತೆ ಮತ್ತಿತರ ಸದಸ್ಯರು ಹಾಜರಿದ್ದರು.
ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿ ರಂಜಿತ್ ವಾರ್ಷಿಕ ವರದಿಯನ್ನು ಓದಿದರು. ಸುರೇಶ್ ವರ್ಮಾ ನಿರೂಪಿಸಿ, ವಂದಿಸಿದರು.