ಮಡಿಕೇರಿ ಜು.9 NEWS DESK : ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸಿದ್ಧರಾಗಿರುವಂತೆ ಮತ್ತು 24 ಗಂಟೆಯೂ ಅಲರ್ಟ್ ಆಗಿರುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೇರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೊಡಗಿನ ಮಳೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ವಿವಿಧ ಇಲಾಖೆಗಳಿಗೆ ತಿಳಿಸಿದ್ದಾರೆ.
ಎನ್‍ಡಿಆರ್‍ಎಫ್, ಕರ್ನಾಟಕ ಸ್ಟೇಟ್ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಅಥಾರಿಟಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರಿನ ಉನ್ನತ ಅಧಿಕಾರಿಗಳೊಂದಿಗೆ ಶಾಸಕರು ಸಂಪರ್ಕದಲ್ಲಿದ್ದಾರೆ.