ಮಡಿಕೇರಿ ಜು.10 NEWS DESK : ಸಾರ್ವಜನಿಕರ ಕುಂದುಕೊರತೆಯನ್ನು ಶೀಘ್ರ ಪರಿಹರಿಸುವಲ್ಲಿ ಆಯಾಯ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಆ ನಿಟ್ಟಿನಲ್ಲಿ ಈ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ‘ಜನಸ್ಪಂದನ ಸಭೆ’ ನಡೆಯಲಿದೆ. ಸಾರ್ವಜನಿಕರು ಈ ಅವಕಾಶ ಬಳಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಕೋರಿದ್ದಾರೆ.