ಮಡಿಕೇರಿ ಜು.10 NEWS DESK : ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ನೋಟ್ ಪುಸ್ತಕ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಲಾಯಿತು.
ದಾನಿಗಳಾದ ಪ್ರೆಸಿಲ್ಲ ಕುಮಾರಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ, ನಾನು ಇದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು ಕಿನ್ಯಾ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಮೈಸೂರಿನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಎಂದು ಕೀಳರಿಮೆ ಪಡೆದೆ ಹೆಚ್ಚು ಶಿಕ್ಷಣವನ್ನು ಪಡೆಯುವ ಮೂಲಕ ಉನ್ನತ ಹುದ್ದೆಗೆ ಏರಬೇಕೆಂದು ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರ ಅಂಬಾಮಣಿ ಮಾತನಾಡಿ, ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ವತಿಯಿಂದ ಸಿಸ್ಟರ್ ಪ್ರೆಸಿಲ್ಲ ಕುಮಾರಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಸಹ ಶಿಕ್ಷಕರಾದ ದಿವ್ಯ ದಿನೇಶ್, ಎಸ್‌ಡಿಎಂಸಿ ಅಧ್ಯಕ್ಷರಾದ ಪೂರ್ಣಿಮ ಹಾಗೂ ಸಹ ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.