ಮಡಿಕೇರಿ ಜು.10 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡಿದೆ.
ಈ ಸಂಸ್ಥೆ ಮೂಲಕ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ 5182 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5168 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2024-25ನೇ ಆರ್ಥಿಕ ಸಾಲಿನಲ್ಲಿ 65 ಪ್ರಕರಣಗಳು ದಾಖಲಾಗಿ 54 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 14 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.55 ಸಾವಿರ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25 ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.
ಆ ದಿಸೆಯಲ್ಲಿ ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್ ರೈ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939(ಕಚೇರಿ) ನ್ನು ಸಂಪರ್ಕಿಸಬಹುದು ಎಂದು ಸಾಂತ್ವನ ಕೌಟುಂಬಿಕ ಸಲಹಾ ಕೇಂದ್ರದ ಅಧ್ಯಕ್ಷರು ತಿಳಿಸಿದ್ದಾರೆ.
Breaking News
- *ಕೊಡಗಿನ ಬಸವೇಶ್ವರ, ಪೇಟೆ ರಾಮ ಮಂದಿರ, ವಿಜಯ ವಿನಾಯಕ ದೇವಾಲಯಗಳಲ್ಲಿ ಕಳ್ಳತನ : ಅಂತರ್ ಜಿಲ್ಲಾ ಆರೋಪಿಯ ಬಂಧನ*
- *ಕನಕದಾಸರು ಕೀರ್ತನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು : ಶಾಸಕ ಡಾ.ಮಂತರ್ ಗೌಡ*
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*