ಮಡಿಕೇರಿ ಜು.11 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ಸಿಇಟಿ/ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿ.ಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಸಿಇಟಿ/ನೀಟ್ ಮೂಲಕ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ ಸೈಟ್ https://kmdconline.karnataka.gov.in/ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿ ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ. ಪಿ.ಯು.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋಟ್ ಸೈಜ್), ಸಿ.ಇ.ಟಿ/ ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.100 ರ ಛಾಪಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ತಾ|| ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂರವಾಣಿ ಸಂಖ್ಯೆ 08272-201449 ಗೆ ಸಂಪರ್ಕಿಸಬಹುದಾಗಿದೆ. “ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ, 20 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Breaking News
- *ಜೋಡುಬೀಟಿ- ಕುಂದ ಸಂಪರ್ಕ ರಸ್ತೆಗೆ ನಾಯಕ್ ಕೂಕಂಡ ಎನ್.ಪೊನ್ನಪ್ಪ ನಾಮಕರಣ : ಎಲ್ಲೆಡೆ ವೀರಯೋಧರಿಗೆ ಗೌರವಸಲ್ಲಿಸುವ ಕಾರ್ಯವಾಗಬೇಕು : ಕೊಟ್ಟುಕತ್ತಿರ ಸೋಮಣ್ಣ*
- *ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೆಗ್ಗಳಕ್ಕೆ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ*
- *ನ.19 ರಂದು ಮಡಿಕೇರಿ ತಲುಪಲಿದೆ ಮದ್ರಾಸ್ ಎಂಜಿನಿಯರಿಂಗ್ ಆರ್ಮಿ ಗ್ರೂಪ್ನ ಬೈಕ್ ರ್ಯಾಲಿ*
- *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕನಕದಾಸ ಜಯಂತಿಯ ಅರ್ಥಪೂರ್ಣ ಆಚರಣೆ : ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಕನಕದಾಸರು : ಮೇಜರ್ ಡಾ.ರಾಘವ ಶ್ಲಾಘನೆ*
- *ನ.21 ರಂದು ಮಡಿಕೇರಿಯಲ್ಲಿ ರಕ್ತದಾನ ಮತ್ತು ಕಣ್ಣು ತಪಾಸಣಾ ಶಿಬಿರ*
- *ಮಡಿಕೇರಿಯಲ್ಲಿ ವಕೀಲರ ಕ್ರೀಡಾಕೂಟ : ಕ್ರೀಡಾ ಸ್ಫೂರ್ತಿ ಜೀವನಕ್ಕೂ ಸ್ಫೂರ್ತಿಯಾಗಲಿ : ಶಾಸಕ ಡಾ.ಮಂತರ್ ಗೌಡ*
- ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
- *ಡಾ.ಸೂರ್ಯ ಕುಮಾರ್ ಅವರ “ಮಂಗಳಿ” ಪುಸ್ತಕ ಬಿಡುಗಡೆ*
- *ಸಿದ್ದಾಪುರದಲ್ಲಿ ನೃತ್ಯ ಸಂಭ್ರಮ : ಗಮನ ಸೆಳೆದ ನೃತ್ಯ ವೈಭವ*
- *ಎಸ್.ಕೆ.ಎಸ್.ಎಸ್.ಎಫ್ ವಿರಾಜಪೇಟೆ ವಲಯ ಇಸ್ಲಾಮಿಕ್ ಕಲೋತ್ಸವ : ವಿರಾಜಪೇಟೆ ಯೂನಿಟ್ ಚಾಂಪಿಯನ್*