ಮಡಿಕೇರಿ ಜು.11 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.10 ಸಾವಿರ ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ, 20 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ಜುಲೈ, 20 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 2024-25ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2023ರ ಏಪ್ರಿಲ್, 01 ರಿಂದ 2024 ರ ಮಾರ್ಚ್, 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು.
ಅಂದರೆ 2023 ರ ಏಪ್ರಿಲ್, 01 ರಿಂದ 2024 ರ ಮಾರ್ಚ್, 31 ರ ಅವಧಿಯ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕ ರೂ.10 ಸಾವಿರ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
Breaking News
- *ವಿರಾಜಪೇಟೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟ : ಐವರ ಬಂಧನ*
- *ಗುಡ್ಡೆಹೊಸೂರು : ರಾಷ್ಟ್ರೀಕೃತ ಬ್ಯಾಂಕ್ ಮಾದರಿಯ ಡಿಜಿಟಲೀಕರಣ ವ್ಯವಸ್ಥೆ ಸಹಕಾರಿ ಕ್ಷೇತ್ರದ ಬ್ಯಾಂಕಿಂಗ್ ನಲ್ಲೂ ಅತ್ಯಗತ್ಯ : ಎಂ.ಎಂ.ಶ್ಯಾಮಲ*
- *ರಾಷ್ಟ್ರೀಯ ಸಬ್ ಜೂನಿಯರ್ ಮಹಿಳಾ ಹಾಕಿ ತಂಡದ ಸೆಂಟರ್ ಫಾರ್ವರ್ಡ್ ಆಗಿ ಮಡಿಕೇರಿಯ ಅಕ್ಷರ*
- *ಸೋಮವಾರಪೇಟೆ : ಅಪ್ಪು ಅಭಿಮಾನಿಗಳ ಬಳಗದಿಂದ ಸಂಭ್ರಮದ ಮಕ್ಕಳ ದಿನಾಚರಣೆ : ಹಲವು ಸಾಧಕರಿಗೆ ಸನ್ಮಾನ*
- *ನಿಧನ ಸುದ್ದಿ*
- *ಮಡಿಕೇರಿ ಅಂಗನವಾಡಿಯಲ್ಲಿ ಬಾಲಮೇಳದಲ್ಲಿ ಮಿಂಚಿದ ಪುಟಾಣಿಗಳು*
- *ಮಡಿಕೇರಿಯ ಎಸ್ಎಸ್ ಆಸ್ಪತ್ರೆಯಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕಲಾಪ್ರತಿಭೆಗೆ ಸಾಕ್ಷಿಯಾದ ವಿದ್ಯಾರ್ಥಿಗಳು*
- *ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*