ವಿರಾಜಪೇಟೆ ಜು.11 NEWS DESK : ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಉದ್ಘಾಟಿಸಿ ಮಾತನಾಡಿ, ಮಕ್ಕಳ ಸೂಪ್ತ ಪ್ರತಿಭೆ ಹೊರಹೊಮ್ಮಲು ಪ್ರತಿಭಾ ದಿನಾಚರಣೆ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಇದನ್ನು ಮುಕ್ತವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದರು.
ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ಶಾಲಾ ಹಂತದಲ್ಲಿ ಪ್ರತಿಭಾ ದಿನಾಚರಣೆ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಮತ್ತು ಶಾಲೆಯ ಏಳಿಗೆಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿ, ಕಾರ್ಯಕ್ರಮ ಸ್ವರೂಪವನ್ನು ಶ್ಲ್ಯಾಘಿಸಿದರು.
ಪ್ರತಿಭಾ ದಿನಾಚರಣೆ ಪ್ರಯುಕ್ತ ಶಾಲೆಯ ಎಂಟನೇ ತರಗತಿಯ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯಪಾಧ್ಯಾಯರುಗಳಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕವಿತಾ ಮನೋಜ್, ಕಾರ್ಯದರ್ಶಿ ರೂಪ ಲಕ್ಷ್ಮಿ, ವಿದ್ಯಾರ್ಥಿ ಪ್ರತಿನಿಧಿ ರಿಸಿಕಾ ರಾಜೇಶ್, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.