ಕುಶಾಲನಗರ ಜು.11 NEWS DESK : ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ, ಸರಕಾರಿ ಇಂಜಿನಿಯರಿಂಗ್ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಗೆ ಅಡ್ಡಿ ಉಂಟಾಗುತ್ತಿದೆ. ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತೊಡಕು ಉಂಟಾಗುವುದು ಸಹಜವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ.ಲೋಕೇಶ್ ಭರಣಿ ಅವರು ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಕಾರ್ಯದರ್ಶಿ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಜನಸಂಖ್ಯಾ ಸ್ಫೋಟದಿಂದ ಆಗುತ್ತಿರುವ ಪ್ರಸಕ್ತ ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಕುಶಾಲನಗರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ಇಂದೂಧರ್ ಅವರು ಪ್ರಾಸ್ತಾವಿಕ ನುಡಿಗಳಲ್ಲಿ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವ ವಿಧಾನಗಳ ಬಗ್ಗೆ ಮಾಹಿತಿ ಒದಗಿಸಿದರು.
ಗುಡ್ಡೆ ಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಕಾರ್ಯಕ್ರಮದ ನಿರೂಪಣೆಯನ್ನು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್ಚು ಕೆ ಶಾಂತಿ ಅವರು ಸ್ವಾಗತಿಸಿ ನಿರೂಪಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ದನ್ ರಾವ್ ವಂದಿಸಿದರು. ಕಾರ್ಯಕ್ರಮಕ್ಕೆ ಮುನ್ನ ಕುಶಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಮುಂಭಾಗದಿಂದ ಆಶಾ ಕಾರ್ಯಕರ್ತೆಯರು, ಧರ್ಮಸ್ಥಳ ಯೋಜನೆಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಜಾಥಾವನ್ನು ಉದ್ದೇಶಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಅವರು ಮಾತನಾಡಿದರು.